ಮಹಾರಾಷ್ಟ್ರ ವಿಧಾನಸಭೆ ನಾಳೆ ಮತದಾನ

 ಮಹಾರಾಷ್ಟ್ರ ವಿಧಾನಸಭೆಯ ಒಂದೇ ಹಂತದ ಮತ್ತು ಜಾರ್ಖಂಡ್‌ ವಿಧಾನಸಭೆಯ ಎರಡನೇ ಹಂತದ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಂಡಿದೆ. ನವೆಂಬರ್​​ 20 ರಂದು ಮತದಾನ ನಡೆಯಲಿದೆ.



ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣಾ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಂಡಿದೆ. ನವೆಂಬರ್ 20 ರಂದು ಮಹಾರಾಷ್ಟ್ರದ ಎಲ್ಲಾ 288 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್‌ ವಿಧಾನಸಭೆಯ 38 ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.


ರಾಜಕೀಯ ಪಕ್ಷಗಳ ಮಧ್ಯೆ 'ಮಹಾ' ಯುದ್ಧ: ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 288 ಸ್ಥಾನಗಳಿಗೆ ಒಟ್ಟು 4,136 ಮಂದಿ ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ 2,086 ಸ್ವತಂತ್ರ ಅಭ್ಯರ್ಥಿಗಳಿದ್ದಾರೆ. 9,63,69,410 ನೋಂದಾಯಿತ ಮತದಾರರಿದ್ದಾರೆ. ರಾಜ್ಯದಲ್ಲಿ ಕೇಂದ್ರ ಚುನಾವಣಾ ಆಯೋಗ 1,00,186 ಮತಗಟ್ಟೆಗಳನ್ನು ಸ್ಥಾಪಿಸಿದೆ. ಚುನಾವಣಾ ಆಯೋಗದ ಪ್ರಕಾರ ಸುಮಾರು 6 ಲಕ್ಷ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸುತ್ತಿದ್ದಾರೆ.

ತೀವ್ರ ಪೈಪೋಟಿ: ಆಡಳಿತಾರೂಢ ಮಹಾಯುತಿಯ ಭಾಗವಾಗಿರುವ ಬಿಜೆಪಿ 149 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ 59 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ.


ವಿರೋಧ ಪಕ್ಷಗಳ ಮಹಾವಿಕಾಸ್ ಅಘಾಡಿ (ಎಂವಿಎ) ಕಾಂಗ್ರೆಸ್, ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ಅವರ ಎನ್‌ಸಿಪಿಯನ್ನು ಒಳಗೊಂಡಿದೆ. ಇದರಲ್ಲಿ ಕಾಂಗ್ರೆಸ್ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಶಿವಸೇನೆಯ ಯುಬಿಟಿ 95 ಮತ್ತು ಶರದ್ ಪವಾರ್ ಅವರ ಎನ್‌ಸಿಪಿ 86 ​​ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೈತ್ರಿ ಪಕ್ಷಗಳು ಕೆಲವು ಸ್ಥಾನಗಳಲ್ಲಿ ಸೌಹಾರ್ದ ಸ್ಪರ್ಧೆ ನಡೆಸುತ್ತಿದ್ದು, ಸೀಟು ಹೊಂದಾಣಿಕೆ ಬಗ್ಗೆ ಒಮ್ಮತ ಮೂಡಿಲ್ಲ. ಬಿಎಸ್‌ಪಿ 237 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಎಂಐಎಂ ಕೂಡ ಗೆಲ್ಲುವ ನಿರೀಕ್ಷೆಯಿರುವ 17 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಜಾರ್ಖಂಡ್​ನಲ್ಲಿ ಎರಡನೇ ಹಂತದ ಮತದಾನ: ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಎರಡನೇ ಹಂತದ ಬಹಿರಂಗ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಂಡಿದೆ. ಎರಡನೇ ಹಂತದಲ್ಲಿ ನವೆಂಬರ್ 20 ರಂದು 38 ಸ್ಥಾನಗಳಿಗೆ ಮತದಾನ ನಡೆಯಲಿದೆ. 38 ಕ್ಷೇತ್ರಗಳಲ್ಲಿ 522 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಮತದಾನಕ್ಕೆ ಸಿದ್ಧತೆಗಳನ್ನು ನಡೆಸಿದೆ. ನಕ್ಸಲ್​​ ಪೀಡಿತ ಪ್ರದೇಶಗಳಲ್ಲಿ ಭಾರೀ ಭದ್ರತೆ ವಹಿಸಲಾಗಿದೆ.


ಜಾರ್ಖಂಡ್ ಒಟ್ಟು 81 ಶಾಸಕಾಂಗ ಸ್ಥಾನಗಳನ್ನು ಹೊಂದಿದೆ. ಮೊದಲ ಹಂತದಲ್ಲಿ 43 ಸ್ಥಾನಗಳಿಗೆ ನವೆಂಬರ್​ 13 ರಂದು ಮತದಾನ ನಡೆದಿತ್ತು. ಜೆಎಂಎಂ, ಕಾಂಗ್ರೆಸ್, ಆರ್‌ಜೆಡಿ ಮತ್ತು ಸಿಪಿಐ ಒಟ್ಟಾಗಿ ಮಹಾಘಟಬಂಧನ್‌ನಲ್ಲಿ ಸ್ಪರ್ಧಿಸಿದರೆ, ಬಿಜೆಪಿ, ಅಖಿಲ ಜಾರ್ಖಂಡ್ ವಿದ್ಯಾರ್ಥಿ ಸಂಘ, ಜೆಡಿಯು ಮತ್ತು ಲೋಕಜನ ಶಕ್ತಿ ರಾಮ್ ವಿಲಾಸ್ ಪಾರ್ಟಿ ಎನ್‌ಡಿಎ ಮೈತ್ರಿಕೂಟವಾಗಿ ಸ್ಪರ್ಧಿಸುತ್ತಿವೆ.



Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget