ಬೆಂಗಳೂರು: 'ಮುಸ್ಲಿಂ ಸಮುದಾಯದ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕು' ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವಾಮೀಜಿ ಅವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸೈಯದ್ ಅಬ್ಬಾಸ್ ಎಂಬುವವರು ನೀಡಿರುವ ದೂರು ಆಧರಿಸಿ ಬಿಎನ್ ಎಸ್ ಸೆಕ್ಷನ್ 299 ರ ಅಡಿ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನ.26ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು.
ವಿವಾದಾತ್ಮಕ ಹೇಳಿಕೆಗೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ವಾಮೀಜಿ ಕ್ಷಮೆ ಕೋರಿದ್ದರು.'ಮುಸ್ಲಿಮರು ಕೂಡ ಈ ದೇಶದ ಪ್ರಜೆಗಳು. ಎಲ್ಲರಂತೆ ಅವರಿಗೂ ಮತದಾನದ ಹಕ್ಕಿದೆ. ನನ್ನ ಹೇಳಿಕೆಯಿಂದ ಮುಸ್ಲಿಂ ಬಾಂಧವರಿಗೆ ನೋವಾಗಿದ್ದರೆ, ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ' ಎಂದಿದ್ದರು.
Post a Comment