ಕಲ್ಬುರ್ಗಿ: ಇಂದು ರಾಜ್ಯದಲ್ಲಿ ಪಿಡಿಓ ನೇಮಕಾತಿ ಪರೀಕ್ಷೆ ನಡೆದಿದ್ದು, ಕಲ್ಬುರ್ಗಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಆಡಳಿತ ಮಂದಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ಆರೋಪಗಳು ವಿದ್ಯಾರ್ಥಿಗಳಿಂದ ಕೇಳಿ ಬಂದಿವೆ. ಕಲ್ಬುರ್ಗಿಯ ಇಸ್ಲಾಂಬಾದ್ ಕಾಲೋನಿ
ಯಲ್ಲಿರುವ ಲಿಟಲ್ ಫ್ಲವರ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿದ್ದರೂ,12 ವಿದ್ಯಾರ್ಥಿಗಳಿಗೆ ಮಾತ್ರ ಬೆಳಗಿನ ಸಾಮಾನ್ಯ ಪ್ರಶ್ನೆ ಪತ್ರಿಕೆಯನ್ನು 20 ನಿಮಿಷ ತಡವಾಗಿ ನೀಡಲಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ಹಾಜರಾಗದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರಶ್ನೆ ಪತ್ರಿಕೆ ಇಲ್ಲದೆ ಪರೀಕ್ಷೆ ಹೇಗೆ ಬರೆಯಲಿ? ನಮಗೆ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಅನುಮಾನವಿದೆಂದು ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು, ಬೀದರ್, ಕಲ್ಬುರ್ಗಿಯ 840 ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Post a Comment