ಕಳೆದ ಕೆಲದಿನಗಳ ಹಿಂದೆ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆ ನಡೆದಿದ್ದು, ಆತನ ಜೊತೆಯಲ್ಲಿದ್ದ ನಕ್ಸಲರು ತಪ್ಪಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿಪ್ರದೇಶವಾದ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಎಲ್ಲಾ ವಾಹನಗಳನ್ನು ನಿಲ್ಲಿಸಿ, ತಪಾಸಣೆ ಮಾಡಿ ಕಳುಹಿಸುತ್ತಿದ್ದು, ಜೊತೆಗೆ ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ಧರಿಸದಿದ್ದರೆ ದಂಡ ವಿಧಿಸಲಾಗುತ್ತಿದೆ.
ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ ನಡೆದ ಸಂದರ್ಭದಲ್ಲಿ ಆತನ ಜೊತೆಗಿದ್ದ ನಕ್ಸಲರು ಓಡಿ ತಪ್ಪಿಸಿಕೊಂಡಿದ್ದು, ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪೊಲೀಸರು ಸಂಪಾಜೆ ಚೆಕ್ ಪೋಸ್ಟಿನಲ್ಲಿ ನಾಕಾಬಂಧಿ ಹಾಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತ್ತಿಂದಿತ್ತ ಚಲಿಸುವ ಪ್ರತೀ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾರೆ.
ಜೊತೆಗೆ ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯಿಂದ ಕನಕಮಜಲು ತನಕ ಹೆಚ್ಚೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸುವ ಪ್ರಯಾಣಿಕರಿಗೆ ಹಾಗೂ ಹೆಲ್ಮೆಟ್ ಧರಿಸದೇ ಸಂಚರಿಸುವ ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸುತ್ತಿದ್ದಾರೆ.
Post a Comment