ರಾಜ್ಯದ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳುವುದು ಖಚಿತವಾಗಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು, ನ.23: ರಾಜ್ಯದ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳುವುದು ಖಚಿತವಾಗಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 9996 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 65784 ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 75780 ಮತ ಗಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ 17ನೇ ಸುತ್ತಿನ ಮತ ಏಣಿಕೆ ಮುಕ್ತಾಯಗೊಂಡಿದ್ದು ಕಾಂಗ್ರೇಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಬಹುತೇಕ ಗೆಲುವು ಸಾಧಿಸಿದ್ದಾರೆ. 88727 ಮತ ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 79622 ಮತ ಗಳಿಸಿದ್ದಾರೆ. ಇನ್ನೆರಡು ಸುತ್ತಿನ ಮತ ಎಣಿಕೆ ಬಾಕಿಯಿದೆ. 9105 ಮತಗಳ ಅಂತರದಿಂದ ಕಾಂಗ್ರೇಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ 12ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಜೆಡಿಎಸ್ ಅಭ್ಯರ್ಥಿ ನಿಖಿಲ್ 51080 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ 73143 ಮತ ಗಳಿಸಿದ್ದಾರೆ. ಕಾಂಗ್ರೆಸ್ 22063 ಮತಗಳ ಭಾರೀ ಮುನ್ನಡೆ ಸಾಧಿಸಿದ್ದಾರೆ.
Post a Comment