ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ಕೇಕೆ!! ಬಿಜೆಪಿ ಜೆಡಿಎಸ್ ಮೈತ್ರಿಗೆ ಆಘಾತ

 


ದೇಶದ 14 ರಾಜ್ಯಗಳಲ್ಲಿನ 48 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳು ಇದರಲ್ಲಿ ಸೇರಿದ್ದು, ಕರ್ನಾಟಕದ ಮೂರೂ ಸ್ಥಾನಗಳಲ್ಲಿ ಕಾಂಗ್ರೆಸ್‌ ಭರ್ಜರಿ ಜಯಗಳಿಸಿದ್ದು, ಬಿಜೆಪಿ ಜೆಡಿಎಸ್‌ ಮೈತ್ರಿಗೆ ಮುಖಭಂಗವಾಗಿದೆ.

ಇನ್ನುಳಿದಂತೆ ಉತ್ತರಪ್ರದೇಶ 9, ರಾಜಸ್ಥಾನ 7, ಪಶ್ಚಿಮ ಬಂಗಾಳ 6, ಅಸ್ಸಾಂ 5, ಬಿಹಾರ 4, ಪಂಜಾಂಬ್‌ 4, ಕರ್ನಾಟಕ 3, ಕೇರಳ 2, ಮಧ್ಯಪ್ರದೇಶ 2, ಸಿಕ್ಕಿಂ 2 ಹಾಗೂ ಛತ್ತೀಸ್‌ಗಢ, ಗುಜರಾತ್, ಮೇಘಾಲಯ, ಉತ್ತರಾಖಂಡ್‌ ರಾಜ್ಯಗಳ ತಲಾ ಒಂದು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಕ್ತಾಯದ ಹಂತಕ್ಕೆ ಬಂದಿದೆ. 


ಇನ್ನು ಉತ್ತರ ಪ್ರದೇಶ ಉಪಚುನಾವಣೆ ಫಲಿತಾಂಶಗಳು 2027 ರಲ್ಲಿ ರಾಜ್ಯದಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಗೆ ಹೊಸ ದಿಕ್ಕನ್ನು ನೀಡಲಿದೆ ಅನ್ನೋದು ರಾಜಕೀಯ ಪಂಡಿತರ ಲೆಕ್ಕಾಚಾರ.


ಮಹಾರಾಷ್ಟ್ರದಲ್ಲಿ ಬಿಜೆಪಿ ಭರ್ಜರಿ ಪ್ರದರ್ಶನ ನೀಡಿದ್ದು, ಜಾರ್ಖಂಡ್‌ನಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತೀವ್ರ ಪೈಪೋಟಿ ಇದ್ದರೂ ಕಾಂಗ್ರೆಸ್‌ ನೇತೃತ್ವದ ವಿಪಕ್ಷ ಮುನ್ನಡೆ ಕಾಯ್ದುಕೊಂಡಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget