ಮಹಾರಾಷ್ಟ್ರ ಚುನಾವಣೆ: ಸಚಿನ್​ ತೆಂಡೂಲ್ಕರ್, ಶರದ್ ಪವಾರ್, ಅಕ್ಷಯ್‌ ಕುಮಾರ್‌​, RBI ಗವರ್ನರ್‌ ಸೇರಿದಂತೆ ಗಣ್ಯರಿಂದ ಮತದಾನ

 ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮುಂಬೈನಲ್ಲಿ ಸಾರ್ವಜನಿಕರ ಜೊತೆಗೆ ರಾಜಕೀಯ, ಸಿನಿಮಾ, ವಾಣಿಜ್ಯ, ಕ್ರೀಡೆ, ವಿವಿಧ ಕ್ಷೇತ್ರಗಳ ಗಣ್ಯರು ಬೆಳಗ್ಗೆ ಬೇಗನೆ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.



ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ವಿಧಾನಸಭೆಯ ಎಲ್ಲ 288 ಕ್ಷೇತ್ರಗಳ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ರಾಜ್ಯಾದ್ಯಂತ ಮತದಾನ ಶುರುವಾಯಿತು.


ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್, ಸಿನಿಮಾ ನಟ ಅಕ್ಷಯ್ ಕುಮಾರ್ ತಮ್ಮ ತಮ್ಮ ಮತಗಟ್ಟೆಗೆ ಬಂದು ವೋಟ್‌ ಮಾಡಿದರು.

ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮುಂಬೈನಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಮತ ಹಾಕಿದರು. ನಾಂದೇಡ್‌ನಲ್ಲಿ ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಅಶೋಕ್ ಚವ್ವಾಣ್ ವೋಟ್‌ ಹಾಕಿದರೆ, ನಟರಾದ ರಿತೇಶ್ ದೇಶ್‌ಮುಖ್, ಜಾನ್ ಅಬ್ರಹಾಂ ಮತ್ತು ಬಾಬಾ ಸಿದ್ದಿಕಿ ಪುತ್ರ ಝೀಶನ್ ಸಿದ್ದಿಕಿ ಮುಂಬೈನಲ್ಲಿ ಮತದಾನ ಮಾಡಿದ್ದಾರೆ.

ಮುಂಬೈನಲ್ಲಿ ತಮ್ಮ ಪತ್ನಿಯೊಂದಿಗೆ ಮತಗಟ್ಟೆಗೆ ಆಗಮಿಸಿ ವೋಟ್ ಹಾಕಿದ ಬಳಿಕ ಮಾತನಾಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪ್ರತಿಕ್ರಿಯಿಸಿ, "ಚುನಾವಣಾ ಆಯೋಗ ಮತಗಟ್ಟೆಗಳಲ್ಲಿ ಮತದಾನಕ್ಕೆ ಅತ್ಯುತ್ತಮ ವ್ಯವಸ್ಥೆ ಕಲ್ಪಿಸಿದೆ. ವಾರದ ಮಧ್ಯೆ ಮತದಾನ ನಡೆಯುತ್ತಿದೆ. ಹಾಗಾಗಿ, ಎಲ್ಲರೂ ಬಂದು ವೋಟ್ ಮಾಡುವ ನಿರೀಕ್ಷೆ ಇದೆ" ಎಂದರು.


ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪತ್ನಿ ಅಂಜಲಿ ತೆಂಡೂಲ್ಕರ್, ಮಗಳು ಸಾರಾ ತೆಂಡೂಲ್ಕರ್‌ ಜೊತೆಗೆ ಆಗಮಿಸಿ ವೋಟ್ ಮಾಡಿದರು.

ಮತ ಹಾಕಿದ ಬಳಿಕ ಮಾತನಾಡಿದ ಅಕ್ಷಯ್ ಕುಮಾರ್, "ಮತಗಟ್ಟೆಗಳಲ್ಲಿ ಮತದಾನಕ್ಕೆ ಅತ್ಯಂತ ಒಳ್ಳೆಯ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರಿಗೆ ಉತ್ತಮ ಸೌಕರ್ಯ ಕಲ್ಪಿಸಲಾಗಿದೆ. ಶುಚಿತ್ವಕ್ಕೂ ಹೆಚ್ಚು ಒತ್ತು ನೀಡಲಾಗಿದೆ. ಪ್ರತಿಯೊಬ್ಬರೂ ಮತಗಟ್ಟೆಗಳಿಗೆ ಬಂದು ವೋಟ್ ಮಾಡಿ" ಎಂದು ಮನವಿ ಮಾಡಿದರು.

"ಮತದಾನ ಪ್ರತಿಯೊಬ್ಬರ ಕರ್ತವ್ಯ. ಇದು ದೇಶಕ್ಕೆ ಮಹತ್ವದ್ದು" ಮತದಾನದ ನಂತರ ನಟ ಸೋನ್ ಸೂದ್ ಹೇಳಿದರು.

ನಟ ರಿತೇಶ್ ದೇಶ್‌ಮುಖ್‌ ಮಾತನಾಡಿ, "ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಲಿದೆ. ನನ್ನ ಇಬ್ಬರು ಸಹೋದರರು ಚುನಾವಣೆಯಲ್ಲಿ ಜಯಗಳಿಸಲಿದ್ದಾರೆ" ಎಂದರು.


ಎನ್‌ಸಿಪಿ-ಎಸ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರು ಕೂಡಾ ಬಾರಾಮತಿ ಮತಗಟ್ಟೆಗೆ ಕುಟುಂಬ ಸಮೇತರಾಗಿ ಬಂದು ಮತ ಹಾಕಿದರು. ಬಾರಾಮತಿ ಕ್ಷೇತ್ರದಿಂದ ಎನ್‌ಸಿಪಿ ಡೆಪ್ಯೂಟಿ ಸಿಎಂ ಅಜಿತ್ ಪವಾರ್ ಅವರನ್ನು ಕಣಕ್ಕಿಳಿಸಿದರೆ, ಎನ್‌ಸಿಪಿ ಎಸ್‌ಪಿ ಯುಗೇಂದ್ರ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಇನ್ನುಳಿದಂತೆ ಸಿನಿಮಾ ನಿರ್ದೇಶಕ ಕಬೀರ್ ಖಾನ್, ಸಿನಿಮಾ ನಿರ್ದೇಶಕಿ ಜೋಯಾ ಅಕ್ತರ್, ಸಿನಿಮಾ ನಿರ್ಮಾಪಕ ಮತ್ತು ನಟ ಫರಾನ್ ಅಕ್ತರ್, ನಟ ಅಲಿ ಫಜಲ್ ವೋಟ್ ಮಾಡಿದ್ದಾರೆ.


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget