ಚೊಚ್ಚಲ ಪಂದ್ಯದಲ್ಲಿ ಕೊನ್‌ಸ್ಟಾಸ್ ಅಬ್ಬರ: ಭೋಜನ ವಿರಾಮದ ವೇಳೆಗೆ 1 ವಿಕೆಟ್​ ನಷ್ಟಕ್ಕೆ 112 ರನ್ ಗಳಿಸಿದ ಆಸ್ಟ್ರೇಲಿಯಾ

 ಬಾಕ್ಸಿಂಗ್​ ಡೇ ಟೆಸ್ಟ್​ನಲ್ಲಿ ಸ್ಯಾಮ್ ಕೊನ್‌ಸ್ಟಾಸ್ 65 ಎಸೆತಗಳಲ್ಲಿ ಬಿರುಸಿನ 60 ರನ್ ಗಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.



ಮೆಲ್ಬೋರ್ನ್,ಆಸ್ಟ್ರೇಲಿಯಾ: ಮೆಲ್ಬೋರ್ನ್, ಆಸ್ಟ್ರೇಲಿಯಾ: ಚೊಚ್ಚಲ ಪಂದ್ಯದಲ್ಲಿ ಸ್ಯಾಮ್ ಕೊನ್‌ಸ್ಟಾಸ್ 65 ಎಸೆತಗಳಲ್ಲಿ ಬಿರುಸಿನ 60 ರನ್ ಗಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಗುರುವಾರ ಎಂಸಿಜಿಯಲ್ಲಿ ಆರಂಭವಾಗಿರುವ ನಾಲ್ಕನೇ ಟೆಸ್ಟ್‌ನ ಮೊದಲ ದಿನದ ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 25 ಓವರ್‌ಗಳಲ್ಲಿ ಒಂದು ವಿಕೆಟ್​ ಕೆಳದುಕೊಂಡು 112ರನ್ ಗಳನ್ನು ಸೇರಿಸಿದೆ.


90,000 ಕ್ಕೂ ಹೆಚ್ಚು ಅಭಿಮಾನಿಗಳ ಮುಂದೆ, ಕೊನ್‌ಸ್ಟಾಸ್ ನಾಲ್ಕು ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳೊಂದಿಗೆ 60 ರನ್​ ಗಳನ್ನು ಬಾರಿಸಿ ಮಿಂಚಿದರು. ಉಸ್ಮಾನ್ ಖವಾಜಾ ಅವರೊಂದಿಗೆ ಸೇರಿ ಆರಂಭಿಕ ವಿಕೆಟ್‌ಗೆ 89 ರನ್‌ಗಳನ್ನು ಸೇರಿಸಿದರು. ಇದು ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಗರಿಷ್ಠ ಆರಂಭಿಕ ಪಾಲುದಾರಿಕೆಯಾಗಿದೆ. ರವೀಂದ್ರ ಜಡೇಜಾ ಅವರ ನೇರ ಎಸೆತದಿಂದ ಕೊನ್‌ಸ್ಟಾಸ್ ಎಲ್ಬಿಡಬ್ಲ್ಯೂ ಬಲೆಗೆ ಬಿದ್ದರು. ಇದಕ್ಕೂ ಮುನ್ನ ಅವರು MCG ಅಂಗಳದಲ್ಲಿ ಪ್ರತಿಯೊಬ್ಬ ವ್ಯಕ್ತಿಯಿಂದ ಪ್ರಶಂಸೆಗೆ ಭಾಜನರಾದರು.

ಇಂದಿನಿಂದ ಶುರುವಾಗಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು . ಉಸ್ಮಾನ್ ಖವಾಜಾ ಅವರೊಂದಿಗೆ ಸ್ಯಾಮ್ ಕಾನ್ಸ್ಟಾಸ್ ಬ್ಯಾಟಿಂಗ್ ಆರಂಭಿಸಿದ್ದರು.


ಭಾರತವು ಅಗ್ರ ಕ್ರಮಾಂಕದ ಶುಭಮನ್ ಗಿಲ್ ಬದಲಿಗೆ ಸ್ಪಿನ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಆಡುವ 11ರ ಪಟ್ಟಿಯಲ್ಲಿ ಸೇರಿಸಿದೆ. ಮತ್ತೊಂದೆಡೆ, ಆಸ್ಟ್ರೇಲಿಯಾವು ಆರಂಭಿಕ ಆಟಗಾರ ಸ್ಯಾಮ್ ಕೊನ್‌ಸ್ಟಾಸ್‌ಗೆ ಚೊಚ್ಚಲ ಟೆಸ್ಟ್ ಪಂದ್ಯಕ್ಕೆ ಅವಕಾಶ ಮಾಡಿಕೊಟ್ಟಿದೆ. ಗಾಯಗೊಂಡ ಜೋಶ್ ಹ್ಯಾಜಲ್‌ವುಡ್‌ ಬದಲಾಗಿ ವೇಗಿ ಸ್ಕಾಟ್ ಬೋಲ್ಯಾಂಡ್ ಕಣಕ್ಕಿಳಿದಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಗ್ರ ಕ್ರಮಾಂಕದಲ್ಲಿ ಆಡಲಿದ್ದಾರೆ.


ಪ್ರಸ್ತುತ 1-1 ರಿಂದ ಎರಡೂ ತಂಡಗಳು ಸಮಬಲ ಸಾಧಿಸಿವೆ. ಎರಡೂ ತಂಡಗಳಿಗೆ ಬಾಕ್ಸಿಂಗ್​ ಡೇ ಟೆಸ್ಟ್​​ ಮುಖ್ಯವಾಗಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ತಲುಪಲು ಈ ಪಂದ್ಯದ ಫಲಿತಾಂಶ ಉಭಯ ತಂಡಗಳ ಭವಿಷ್ಯವನ್ನು ನಿರ್ಧರಿಸಲಿದೆ. ಸರಣಿಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದಿಂದಲೇ ಎರಡೂ ತಂಡಗಳು ಆಡಲಿವೆ.

ಟಾಸ್‌ ಬಳಿಕ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಶುಭಮನ್ ಗಿಲ್ ಹೊರಗುಳಿಯಲಿದ್ದಾರೆ ಎಂದು ಖಚಿತಪಡಿಸಿದ್ದಾರೆ. ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಹನ್ನೊಂದರ ಬಳಗದಲ್ಲಿ ಸೇರ್ಪಡೆಗೊಂಡಿದ್ದಾರೆ. ಅವರು ಅಗ್ರ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ ಎಂದು ರೋಹಿತ್​ ಶರ್ಮಾ ಹೇಳಿದರು.


ತಂಡಗಳು - ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ಕ್ಯಾಪ್ಟನ್​), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೀ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್


ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಸ್ಯಾಮ್ ಕಾನ್ಸ್ಟಾಸ್ , ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ(ವಿಕೀ), ಪ್ಯಾಟ್ ಕಮ್ಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget