₹2 ಸಾವಿರ ಮುಖಬೆಲೆಯ ಶೇ 98.08ರಷ್ಟು ನೋಟು ವಾಪಸ್‌: ಆರ್ ಬಿಐ


 ಮುಂಬೈ: ₹2 ಸಾವಿರ ಮುಖಬೆಲೆಯ ಶೇ98.08ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿವೆ. ಜನರ ಬಳಿ ₹6,839 ಕೋಟಿ ಮೌಲ್ಯದ ನೋಟುಗಳಷ್ಟೇ ಇವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೋಮವಾರ ತಿಳಿಸಿದೆ.

₹2 ಸಾವಿರ ಮುಖಬೆಲೆಯ ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ 2023ರ ಮೇ 19ರಂದು ಆರ್‌ಬಿಐ ಘೋಷಿಸಿತ್ತು.



ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget