ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ಸುಂಟಿಕೊಪ್ಪದಲ್ಲಿ ಪರಿಶೀಲನೆ ನಡೆಸಿದೆ.
ಗುರುವಾರ(ಡಿ.5) ನಸುಕಿನಲ್ಲಿ ಸೋಮವಾರಪೇಟೆ ತಾಲೂಕಿನಲ್ಲಿ ಇಬ್ಬರ ಮನೆ ಹಾಗೂ ಸುಂಟಿಕೊಪ್ಪದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ಮನೆಯವರ ವಿಚಾರಣೆ ನಡೆಸಿ ತೆರಳಿದೆ.
ಸದ್ಯಕ್ಕೆ ಯಾವುದೇ ವ್ಯಕ್ತಿಯನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ ಕೊಡಗಿನ ಸಂಪರ್ಕವಿದ್ದು, ಹಾಗಾಗಿ ಇಂತಹ ದಾಳಿಗಳು ನಡೆಯುತ್ತಿವೆ ಎಂದು ಮೂಲಗಳು ಹೇಳಿವೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಗು ಸೇರಿದಂತೆ ರಾಜ್ಯದ 16 ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ.
Post a Comment