ಮಡಪ್ಪಾಡಿ: ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು ಭಾರೀ ಬಿರುಸಿನ ಪೈಪೋಟಿ ಕಂಡು ಬಂದಿದೆ. ಮತ ಎಣಿಕೆ ಪೂರ್ತಿಯಾದ 6 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಒಬ್ಬರು ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಮಹಿಳಾ ಮೀಸಲು ಕ್ಷೇತ್ರದಿಂದ ಬಿಜೆಪಿಯ ಶಕುಂತಳಾ ಕೇವಳ ಹಾಗೂ ಕಾಂಗ್ರೆಸ್‌ನ ಪ್ರವೀಣ ಯತೀಂದ್ರನಾಥ ಪಾಲ್ತಾಡು ಜಯ ಗಳಿಸಿದ್ದಾರೆ.
ಹಿಂದುಳಿದ ವರ್ಗ ಎ ಸ್ಥಾನದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಆಚಾರಿ ಸಿ.ಎಚ್ ಗಳಿಸಿದ್ದಾರೆ. ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಚಿನ್ ಬಳ್ಳಡ್ಕ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆನಂದ ಶೆಟ್ಟಿಮಜಲು ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಪ್ರದೀಪ್ ಕುಮಾರ್ ಪಿ.ಬಿ. ಜಯಗಳಿಸಿದ್ದಾರೆ. ಸಾಮಾನ್ಯ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಬಿಜೆಪಿ ಮಧ್ಯೆ ಬಿರುಸಿನ ಸ್ಪರ್ಧೆ ಕಂಡು ಬಂದಿದೆ.
Post a Comment