9 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್



ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 9 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ.


ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ನೀಡಲಾಗಿದೆ. ಈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಮಂಡ್ಯ ಜಿಲ್ಲೆಯಲ್ಲಿಯೂ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget