ಕೇರಳದಲ್ಲೂ ಭಾರೀ ಮಳೆ: ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ



ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮ ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.


ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.


ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಪಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ.


ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರ ಇದೆ. ಭಾನುವಾರದಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದೆ. ಅಲ್ಲದೇ ಭೂಕುಸಿತ ಉಂಟಾಗುವ ಸಾಧ್ಯತೆಯಿಂದ ಅರಣ್ಯ ಮಾರ್ಗದಲ್ಲಿ ಕಾಲ್ನಡಿಗೆ ನಿಷೇಧಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರವಾಹ ಉಂಟಾಗುವ ಪ್ರದೇಶದಲ್ಲಿ ನೆಲೆಸಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget