ಜಾತಿ ನಿಂದನೆ ಹಾಗೂ ಹಲವು ಆರೋಪಗಳ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಶಾಸಕ ಹಾಗೂ ಕನ್ನಡ ಚಿತ್ರ ನಿರ್ಮಾಪಕ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆದ ಘಟನೆ ಲಗ್ಗೆರೆ ಸಮೀಪದ ಲಕ್ಷ್ಮೀದೇವಿ ನಗರದಲ್ಲಿ ನಡೆದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆದಿದೆ.
ಜಾತಿ ನಿಂದನೆ ಹಾಗೂ ಹಲವು ಆರೋಪಗಳ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಶಾಸಕ ಹಾಗೂ ಕನ್ನಡ ಚಿತ್ರ ನಿರ್ಮಾಪಕ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆದ ಘಟನೆ ಲಗ್ಗೆರೆ ಸಮೀಪದ ಲಕ್ಷ್ಮೀದೇವಿ ನಗರದಲ್ಲಿ ನಡೆದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆದಿದೆ.ಮುನಿರತ್ನ ಅವರು ಸುಶಾಸನ ದಿನಾಚರಣೆ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿಯೇ ಈ ಘಟನೆ ನಡೆದಿದೆ.ಮುನಿರತ್ನ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅವರ ಕಾರಿನತ್ತ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ವಿರೋಧಿಸಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಜಟಾಪಟಿ. ಮಾರಾಮಾರಿ ನಡೆದಿದೆ. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ಪಕ್ಷದ ಕಾರ್ಯಕರ್ತರು ಗಲಾಟೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ತಮ್ಮ ಮೇಲಿನ ಹಲ್ಲೆ ಖಂಡಿಸಿ ಕಂಠೀರವ ಸ್ಟುಡಿಯೋ ಬಳಿ ಪ್ರತಿಭಟನೆಗೆ ಕುಳಿತಿದ್ದಾರೆ.
Post a Comment