ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ
ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ದಾನಿಗಳು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದ 100 ಅಶಕ್ತರಿಗೆ 'ದೇವಿ ನೆಲೆ' ಎಂಬ ಹೆಸರಿನಲ್ಲಿ ಸೂರು ನಿರ್ಮಿಸುವ ಕನಸಿಗೆ ಇಂದು ಚಾಲನೆ ನೀಡಲಾಯಿತು.
ಕೊಡ್ಲಾಡಿ ಗ್ರಾಮದ ಮಾರ್ಡಿ ಶಾಲಾ ಮೈದಾನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಗುರುಪುರದ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ
ರಾಷ್ಟ್ರೀಯ ಸ್ವಯಂಸೇವಕ ಸಂಘ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಕಾರ್ಯವಾಹರಾದ ಶ್ರೀ ಪಿ. ಎಸ್. ಪ್ರಕಾಶ್ 'ದೇವಿ ನೆಲೆ - ನಮ್ಮ ಮನೆ' ಪರಿಕಲ್ಪನೆಯನ್ನು ಉದ್ಘಾಟಿಸಿದರು.
ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ಸಂಘ ಪರಿವಾರ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Post a Comment