ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಛಿ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಬೆಂಗಳೂರು: ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಛಿ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಘಟನೆಯಲ್ಲಿ ಗಾಯಗೊಂಡ ಯೋಧನನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು. ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
Post a Comment