ಶೇಖ್ ಹಸೀನಾರನ್ನು ವಾಪಸ್ ಕಳುಹಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಮನವಿ

 


ಢಾಕಾ: ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸುವಂತೆ ಭಾರತಕ್ಕೆ ರಾಜತಾಂತ್ರಿಕ ಸಂದೇಶವನ್ನು ರವಾನಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ಹೇಳಿದೆ.ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು 77 ವರ್ಷದ ಹಸೀನಾ ಸೇರಿದಂತೆ ಮಾಜಿ ಸಚಿವರ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಬಂಧನ ವಾರಂಟ್‌ಗಳನ್ನು ಹೊರಡಿಸಿದೆ.

ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿ ಶೇಖ್ ಹಸೀನಾ ಅವರನ್ನು ಢಾಕಾಗೆ ವಾಪಸ್ ಕಳುಹಿಸಲು ಕೋರಿ ಭಾರತ ಸರ್ಕಾರಕ್ಕೆ ಮೌಖಿಕ (ರಾಜತಾಂತ್ರಿಕ ಸಂದೇಶ) ಕಳುಹಿಸಿದ್ದೇವೆ ಎಂದು ವಿದೇಶಾಂಗ ಸಚಿವ ತೌಹಿದ್ ಹುಸೇನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದಕ್ಕೂ ಮುನ್ನ ಗೃಹ ಸಚಿವ ಜಹಾಂಗೀರ್ ಆಲಂ ಅವರು ಭಾರತಕ್ಕೆ ಪತ್ರ ಬರೆದಿದ್ದು, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಮನವಿ ಮಾಡಿದ್ದರು.

ಢಾಕಾ ಮತ್ತು ನವದೆಹಲಿ ನಡುವೆ ಹಸ್ತಾಂತರ ಒಪ್ಪಂದವು ಈಗಾಗಲೇ ಅಸ್ತಿತ್ವದಲ್ಲಿದೆ. ಹಾಗಾಗಿ ಒಪ್ಪಂದದ ಭಾಗವಾಗಿ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಮರಳಿ ಕರೆತರಬಹುದು ಎಂದು ಆಲಂ ಹೇಳಿದ್ದಾರೆ.


ಜುಲೈನಿಂದ ಆಗಸ್ಟ್‌ವರೆಗೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿ ಹಸೀನಾ, ಮಾಜಿ ಸಚಿವರು ಸೇರಿದಂತೆ 46 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರವಾದ ಕಾರಣ ಹಸೀನಾ ಅವರು ಆಗಸ್ಟ್ 5ರಂದು ಭಾರತಕ್ಕೆ ಪಲಾಯನ ಮಾಡಿದ್ದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget