ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಫೆಂಗಾಲ್ ಜನರನ್ನು ಕಂಗಾಲ್ ಮಾಡಿದ್ದು, ಅಪಾರ ಪ್ರಮಾಣದ ನೀರಿನಿಂದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ.
ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ ನೀರು ತುಂಬಿ ಕೂಳೂರು ಬಳಿ ಮಂಗಳೂರು ಟು ಉಡುಪಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಉಡುಪಿಯಿಂದ ಮಂಗಳೂರಿಗೆ ಬರುವ ವಾಹನ ಸವಾರರು ಪರದಾಡುತ್ತಿದ್ದಾರೆ.
ಹೆದ್ದಾರಿ ಬದಿ ಗೇಲ್ಗಾಸ್ ಕಂಪನಿ ರಸ್ತೆ ಅಗೆದಿದ್ದರಿಂದ ಆ ಗುಂಡಿಯಲ್ಲೇ ಇದೀಗ ಮಳೆ ನೀರು ಶೇಖರಣೆಗೊಂಡು ಹೆದ್ದಾರಿ ಕುಸಿದಿದೆ. ಬೈಕ್, ಕಾರು, ಲಾರಿಗಳು ಪಾಸ್ ಆಗುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಇದರಿಂದ ಭಾರೀ ಅನಾಹುತ ತಪ್ಪಿದೆ.
Post a Comment