ಬೆಳ್ಳಾರೆ: ಬೆಳ್ಳಾರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.
ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ವಿಜಯೋತ್ಸವ ಆಚರಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ, ಆರ್.ಕೆ.ಭಟ್ ಕುರುಂಬುಡೇಲು, ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.
Post a Comment