ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.
106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್ನಲ್ಲಿ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.
Post a Comment