ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಚ್ಚರಿ ಹೇಳಿಕೆ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಅಧಿಕಾರ ಹಂಚಿಕೆ ಸೂತ್ರವಾಗಿತ್ತು ಎಂಬ ಹೇಳಿಕೆ ನೀಡಿದ 2 ದಿನಗಳ ಬಳಿಕ ಸಾರ್ವ ಜನಿಕ ಸಭೆಯಲ್ಲಿ ಈ ಮಾತು ಹೇಳಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದೆ.
ಚಾಮರಾಜನಗರ: ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಅಧಿಕಾರ ಹಂಚಿಕೆ ಸೂತ್ರವಾಗಿತ್ತು ಎಂಬ ಹೇಳಿಕೆ ನೀಡಿದ 2 ದಿನಗಳ ಬಳಿಕ ಸಾರ್ವ ಜನಿಕ ಸಭೆಯಲ್ಲಿ ಈ ಮಾತು ಹೇಳಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದೆ.
ಡಿಕೆಶಿಯವರು ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಹೇಳಿದ್ದರು . ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಗೃಹ ಸಚಿವ ಪರಮೇಶ್ವರ್ ಕೂಡ ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದರು.
ಇವತ್ತು ಏನೂ ಹೇಳಿದ್ರು?
ಸತ್ತೇಗಾಲ ಸರ್ಕಾರಿ ಶಾಲಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಏನಿಲ್ಲ ಅಂದ್ರು 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಂಡಿಲ್ಲ. ಬದಲಿಗೆ ಸಿಎಂ ಖುರ್ಚಿ ಗಟ್ಟಿಯಾಗಿದೆ. ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಅಭಿಮಾನ ಗಳಿಸದೆ ಇದ್ರೆ ರಾಜಕೀಯದಲ್ಲಿ ಉಳಿಗಾಲ ಸಾಧ್ಯವಿಲ್ಲ ಎಂದು ಹೇಳಿದರು.
ಆದರೆ ಸಿ ಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಕೇವಲ ಒಂದೂವರೆ ವರ್ಷವಷ್ಟೆ ಪೂರೈಸಿದ್ದು, ಇನ್ನೂ ಕಾಂಗ್ರೆಸ್ ಗೆ ಮೂರುವರೆ ವರ್ಷದ ಆಡಳಿತ ಬಾಕಿಯಿದೆ. ಇಷ್ಟು ಅವಧಿ ಬಾಕಿಯಿರುವಾಗಲೇ ಸಿಎಂ ಅವರ ರಾಜಕೀಯ ವೈರಾಗ್ಯದ ಹೇಳಿಕೆಯ ಹಿಂದಿನ ಮರ್ಮ ಏನು ಅನ್ನುವ ಬಗ್ಗೆ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗಳು ಆರಂಭಗೊಂಡಿದೆ.
Post a Comment