ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ 14 ಮತಗಳು ಬಂದಿದ್ದು ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ 21 ಮತಗಳನ್ನು ಪಡೆದಿದ್ದಾರೆ.
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಸೋಲಿನ ನಂತರ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಮತ್ತೆ ಮುಗಭಂಗವಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಕುಮಾರಸ್ವಾಮಿ ಬಣಕ್ಕೆ ಹಿನ್ನಡೆಯಾಗಿದ್ದು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ 14 ಮತಗಳು ಬಂದಿದ್ದು ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ 21 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಲ್ ಶ್ರೀನಿವಾಸ್ ಮತ್ತು ಡಾ. ರೇಣುಕಾಪ್ರಸಾದ್ ಕೆ.ವಿ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಸಹಾಯಕ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ. ಆರ್ ಮತ್ತು ಖಜಾಂಚಿಯಾಗಿ ಎನ್.ಬಾಲಕೃಷ್ಣ ಆಯ್ಕೆ ಆಗಿದ್ದಾರೆ.
Post a Comment