ನವದೆಹಲಿ : ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಎಲ್ಕೆ ಅಡ್ವಾಣಿ, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಎಲ್ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ಎರಡು ವಾರಗಳಿಂದ ಅಡ್ವಾಣಿ ಅವರ ಆರೋಗ್ಯದಲ್ಲಿ ಆಗಾಗ ಏರುಪೇರು ಕಂಡುಬರುತ್ತಿತ್ತು. ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಕೂಡ ಅಡ್ವಾಣಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಸುಧಾರಿಸಿದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.
Post a Comment