ಕುಕ್ಕೆ ಸುಬ್ರಹ್ಮಣ್ಯ ದೇಗುಲ: ನೀರಿನಲ್ಲಿ ಬಂಡಿ ಉತ್ಸವ

 


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಕೊಪ್ಪರಿಗೆ ಡಿ.12 ರಂದು ಇಳಿಯುವುದರೊಂದಿಗೆ ಸಂಪನ್ನಗೊಂಡಿತು.

ಮುಂಜಾನೆ ಪ್ರಧಾನ ಅರ್ಚಕ ಸೀತರಾಮ ಎಡಪಡಿತ್ತಾಯರು ವೈದಿಕ ವಿಧಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.


ಎಲ್ಲಾ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿತ್ತು. ಗಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿಯಾಯಿತು.ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣದ ಸುತ್ತಲೂ ನೀರನ್ನು ಮದ್ಯಾಹ್ನದ ನಂತರ ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ಆರಂಭವಾಯಿತು. ನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ಬಳಿಕ ವಿವಿಧ ಸಂಗೀತ ಸುತ್ತುಗಳ ಪಾಲಕಿ ಉತ್ಸವ ನೀರಿನಲ್ಲಿ ನಡೆಯಿತು. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಈ ಉತ್ಸವವು ಬೇರೆ ಯಾವುದೇ ದೇವಸ್ಥಾನದಲ್ಲಿ ಕಾಣಸಿಗುವುದಿಲ್ಲ.

ನೀರಾಟವಾಡಿದ ಯಶಸ್ವಿ ಆನೆ:


ಶ್ರೀ ದೇವಳದ ಆನೆ ಯಶಸ್ವಿಯು ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದ ಮಕ್ಕಳು, ಭಕ್ತರು ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿಂದ ನೀರು ಎರಚಿ, ನೀರಾಟವಾಡಿ, ತಾನು ಸಂಭ್ರಮ ಪಡುವುದರೊಂದಿಗೆ, ಭಕ್ತಾಧಿಗಳಿಗೂ ಹೆಚ್ಚಿನ ಸಂತಸವನ್ನು ನೀಡಿತು.

ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ., ಅಚ್ಚುತ್ತ ಗೌಡ ಆಲ್ಕಬೆ, ದೇವಳದ ನಿವೃತ್ತ ಇಒ ಡಾ.ನಿಂಗಯ್ಯ, ಪದ್ಮಾ ಡಾ.ನಿಂಗಯ್ಯ. ಏಕೌಂಟೆಟ್ ರಾಜಲಕ್ಷ್ಮಿ ಶೆಟ್ಟಿಗಾರ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್, ಸೇರಿದಂತೆ ದೇವಳದ ಸಿಬ್ಬಂದಿಗಳು ಭಕ್ತರು.


ಇಂದಿನಿಂದ ಸರ್ಪಸಂಸ್ಕಾರ ಸೇವೆ ಆರಂಭ:


ಶ್ರೀ ಕ್ಷೇತ್ರದ ಜಾತ್ರೆಯ ಅವಧಿಯಲ್ಲಿ ಶ್ರೀ ದೇವಳದ ವಿಶೇಷ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ನಡೆಯುವುದಿಲ್ಲ. ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಮುಕ್ತಾಯವಾಗಿರುವುದರಿಂದ ಡಿ.13ರಿಂದ ದೇವಳದ ಪ್ರಧಾನ ಸೇವೆಯಾದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.


ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೀರಿನಲ್ಲಿ ಬಂಡಿ ಉತ್ಸವದ ವಿಡಿಯೋ ತುಣುಕು 👇🏻👇🏻



Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget