ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಶಿವಸೇನಾ ನಾಯಕ ಏಕನಾಥ ಶಿಂದೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಆ ಮೂಲಕ ಮಹಾಯುತಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಬಾಲಿವುಡ್ ತಾರೆಯರುಮ ಉದ್ಯಮಿಗಳು ಹಾಗೂ ಬಿಜೆಪಿ ನೇತೃತ್ವದ ಮಹಾಯುತಿ ಕೂಟ ಸಾವಿರಾರು ಬೆಂಬಲಿಗರು ಪಾಲ್ಗೊಂಡಿದ್ದರು.ಫಡ್ನವೀಸ್ ಸಂಪುಟಕ್ಕೆ ಸೇರಲಿರುವ ಇತರ ಸಚಿವರು ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
Post a Comment