ಸಾಮಾನ್ಯ ಜನರ ಅನುಕೂಲಕ್ಕಾಗಿ ದೇಶದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಅವುಗಳಲ್ಲಿ 2016 ರಲ್ಲಿ ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯೂ ಒಂದು. ಈ ಯೋಜನೆಯಡಿಯಲ್ಲಿ ಮೊದಲ ಹಂತದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಐದು ಕೋಟಿ ಮಹಿಳಾ ಸದಸ್ಯರಿಗೆ ಉಚಿತ ಎಲ್.ಪಿ.ಜಿ ಸಂಪರ್ಕವನ್ನು ಒದಗಿಸಲಾಗಿತ್ತು. ಇದೀಗ ಈ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಯಾರೆಲ್ಲಾ ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದು, ಬೇಕಾಗಿರುವ ದಾಖಲೆಗಳು, ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಕೆಲವು ವರ್ಷಗಳ ಹಿಂದೆ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಅಡುಗೆಗಾಗಿ ಮಹಿಳೆಯರು ಕಟ್ಟಿಗೆ ಒಲೆಯನ್ನೇ ಬಳಕೆ ಮಾಡುತ್ತಿದ್ದರು, ನಿರಂತರ ಕಟ್ಟಿಗೆ ಬಳಕೆ ಮಾಡುವುದರಿಂದ ಅದರಿಂದ ಬರುವ ಹೊಗೆಯು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಕಾರಣಕ್ಕೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು ಒದಗಿಸುವ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಬಡತನ ರೇಖೆಗಿಂತ ಕೆಳಗಿರುವ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದರು. ಇದೀಗ ಈ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದೆ.
Post a Comment