ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ 28 ವರ್ಷದ ಪಳಂಗೋಟಿ ದಿವಿನ್ ಕೊನೆ ಉಸಿರು.
ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು. ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು.
ಆದ್ರೆ ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆ ಇಂದು ರಾತ್ರಿ ಧಿವಿನ್ ಕೊನೆಯುಸಿರು ಎಳೆದಿದ್ದಾರೆ.
ತಂದೆ ತಾಯಿಗೆ ಏಕೈಕ ಮಗನಾಗಿದ್ದ ಧಿವಿನ್ 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು.
ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು ಇದೇ ಫೆಬ್ರವರಿಯಲ್ಲಿ ದಿವಿನ್ ವಿವಾಹವಾಗಬೇಕಿತ್ತು.
ಆದ್ರೆ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿ ಇದ್ದ 4 ಸೈನಿಕರು ಸ್ಥಳದಲ್ಲಿ ಸಾವನ್ನಪ್ಪಿದ್ದರು.
ಚಿಂತಾಜನಕ ಸ್ಥಿತಿಯಲ್ಲಿದ್ದ ದಿವಿನ್ ಚಿಕಿತ್ಸೆಗೆ ಸ್ಪಂದಿಸದೆ ಇದೀಗ ಸಾವನ್ನಪ್ಪಿದ್ದಾರೆ .
ಶಾಸಕ ಮಂತರ್ ಗೌಡ ಸಂತಾಪ
ದಿವಿನ್ ಚಿಕಿತ್ಸೆ ಸಂಬಂಧಿತ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಕೂಡ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ಶಿವಮೊಗ್ಗ ಮೂಲದ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯುತ್ತಿದ್ದರು. ದಿವಿನ್ ನಿದಾನಕ್ಕೆ ಶಾಸಕ ಮಂತರ್ ಗೌಡ ಕಂಬನಿ ಮಿಡಿದಿದ್ದಾರೆ.
Post a Comment