ಹಾಸನ: ಈ ಬಂಡೆ ಯಾವತ್ತಿದ್ರೂ ಸಿದ್ದರಾಮಯ್ಯನವರ ಜೊತೆಗೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನೀವು ಚಿಂತೆ ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar), ನಾನು ಎಲ್ಲಿರ್ತೀನಿ ಅಲ್ಲಿ , ಪ್ರಾಮಾಣಿವಾಗಿಯೇ ಇರ್ತೀನಿ ಈ ಹಾಸನದ ಇತಿಹಾಸ ನೋಡಿದರೆ ನೋವಾಗುತ್ತೆ. ಹಲವು ರಾಜಕೀಯ ಕುಟುಂಬಗಳು ನೋವುಂಡಿವೆ. ಹಾಸನಾಂಬೆ ಆ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡಬೇಕು. ಈ ಜಿಲ್ಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶಗೊಂಡು, ನೊಂದ ತಾಯಂದಿರಿಗೆ ಧೈರ್ಯ ತುಂಬಲು ಹಾಸನ ಜಿಲ್ಲೆಯ ಜನರು ಸಂಸದ ಶ್ರೇಯಸ್ ಪಟೇಲ್ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಜಿಲ್ಲೆಯನ್ನು ನೋಡಿದರೆ ಸಂಕಟವಾಗುತ್ತದೆ. ತಾಯಂದಿರ ಸ್ವಾಭಿಮಾನ ಉಳಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಿದ್ದೇವೆ.
ಹಾಸನದ ಮಾಜಿ ಸಂಸರ ಬಗ್ಗೆ ಮಾತನಾಡಲು ಅಸಹ್ಯವಾಗುತ್ತದೆ. ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಿದ್ದಾರೆ. ನಾವು ಜನರ ಭಾವನೆ, ಧರ್ಮಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಅಧಿಕಾರ ಶಾಶ್ವತವಲ್ಲ, ಕಾಂಗ್ರೆಸ್ ಸಾಧನೆಗಳು ಅಜರಾಮರ. ಇದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯ ಗೆಲುವಿನ, ನಂಬಿಕೆಯ ಸಮಾವೇಶ ಎಂದು ಹೇಳಿದ್ದಾರೆ.
ಕೆಎಂಎಫ್ ಅನ್ನು ಅಮೂಲ್ ಜೊತೆಗೆ ವಿಲೀನ ಮಾಡಲು ಹೊರಟಿದ್ದರು. ಈಗ ನಂದಿನಿ ಹಾಲು ದೆಹಲಿಗೆ ಹೋಗುತ್ತಿದೆ. ನಂದಿನಿ ತುಪ್ಪ ತಿರುಪತಿ ತಿಮ್ಮಪ್ಪ ಪ್ರಸಾದ ತಯಾರಿಸಲು ಹೋಗುತ್ತದೆ. ನಾವು ರಾಜಕಾರಣ ಮಾಡಲು ಬಂದಿಲ್ಲ. ನಿಮ್ಮ ಬದುಕಿನಲ್ಲಿ ಒಂದಾಗಲು ನಾವು ಬಂದಿದ್ದೇವೆ. ನಮ್ಮಲ್ಲಿ ಒಗ್ಗಟ್ಟಿದೆ, ನಿಮ್ಮಲ್ಲಿ ಬಿಕ್ಕಟ್ಟಿದೆ. ನಾವು ವಚನಭ್ರಷ್ಟರಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಮಾತ್ರ ದೇಶಕ್ಕೆ ಭವಿಷ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM DK Shivakumar) ಹೇಳಿದ್ದಾರೆ.
Post a Comment