ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದ ಸಂಭ್ರಮದ ಮಂಗಳೂರು ಕಂಬಳಕ್ಕೆ ಚಾಲನೆ

 ನಾಳೆ (ಡಿ.29) ಕಂಬಳದ ಫೈನಲ್ ಸ್ಪರ್ಧೆ


ಮಂಗಳೂರು: ದಕ್ಷಿಣ ಕನ್ನಡದ ಎಂಪಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದ 8ನೇ ವರ್ಷದ 'ಮಂಗಳೂರು ಕಂಬಳಕ್ಕೆ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಇಂದು (ಡಿ.28) ಚಾಲನೆ ನೀಡಲಾಯಿತು.



ಕಾಶ್ಮೀರದ ರಜರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್ ಅವರು ಕಂಬಳಕ್ಕೆ ಚಾಲನೆ ನೀಡಿದರು.



ಮಾಜಿ ಮೇಲ್ಮನೆ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ. ವಿ.ಕುಲಪತಿ ಪಿ.ಎಲ್ ಧರ್ಮ, ಚಿತ್ತರಂಜನ್,ಬ್ರಹ್ಮಬೈದರ್ಕಳ ಗರೋಡಿ,ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ವಿರೋಧ ರಾಮಕೃಷ್ಣ ಮಠದ ಚಿದಂಬರಾನಂದ ಸ್ವಾಮೀಜಿ, ಪ್ರಮುಖರಾದ ಪ್ರದೀಪ್ ಕುಮಾರ್ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು ಕಟೀಲ್ ಅನಂತ ಪದ್ಮನಾಭ ಆಸ್ರಣ್ಣ,ಜಯ ನಾಯಕ ಶೆಟ್ಟಿ, ಕಾರ್ಪೊರೇಟರ ಕಿರಣ್ ಕೋಡಿಕಲ್, ಪಾಲಿಕೆ. ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಮಾಜಿ ಮೇಯರ್ ಕವಿತಾ ಸನಿಲ್, ಬ್ರಿಗೇಡಿಯರ್ ಐ.ಎಂ.ರೈ, ಮಂಗಳೂರು ಕಂಬಳ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಉಪಾಧ್ಯಕ್ಷರಾದ ಈಶ್ವರ್ ಪ್ರಸಾದ್ ಶೆಟ್ಟಿ, ಅಶೋಕ್ ಕೃಷ್ಣಾಪುರ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಕಾರ್ಯದರ್ಶಿ ಸಾಕ್ಷತ್ ಶೆಟ್ಟಿ, ಸಂಚಾಲಕ ಸಚಿತ್ ಸಚಿತ್ ಸಾಂತ್ಯಗುತ್ತು, ಪ್ರಸಾದ್ ಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ವಿಜಯ್ ಕುಮಾರ್, ಪ್ರಕಾಶ್ ಗರೋಡಿ, ವಸಂತ್ ಪೂಜಾರಿ ಇನ್ನೂ ಗಣ್ಯರು.



ಸಂಜೆ ಸಭಾ ಕಾರ್ಯಕ್ರಮ:


ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಆರ್.ಜಿ ಗ್ರೂಪ್ ನ ಸಿ.ಎಂ.ಡಿ, ಮಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಡಾ.ಕೆ. ಪ್ರಕಾಶ್‌ ಶೆಟ್ಟಿ ವಹಿಸಲಿದ್ದಾರೆ. ಇವರೊಂದಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ಮಂಗಳೂರು, ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ, ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಹಾಲಿ-ಮಾಜಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಇತರೆ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಉದ್ಯಮಿಗಳು, ಗಣ್ಯರು ಭಾಗವಹಿಸುವರು.



29ರಂದು ಕಂಬಳದ ಫೈನಲ್ ಸ್ಪರ್ಧೆ: ಎರಡು ದಿನಗಳ ಮಂಗಳೂರು ಕಂಬಳದಲ್ಲಿ ಫೈನಲ್ ಸ್ಪರ್ಧೆ ಡಿ.29ರಂದು ಬೆಳಗ್ಗೆ ನಡೆಯುತ್ತದೆ. 29ರ ಬೆಳಗ್ಗೆ ನಡೆಯುವ ಮಂಗಳೂರು ಕಂಬಳದ ಹೆಚ್ಚು ಕುತೂಹಲ ಹಾಗೂ ಆಸಕ್ತಿ ಮೂಡಿಸುವ ಫೈನಲ್ ಸ್ಪರ್ಧೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಭಾಗವಹಿಸುವ ನಿರೀಕ್ಷೆಯಿದೆ.



Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget