ಬೆಳಗಾವಿ ಪೋಲೀಸರ ವಶದಲ್ಲಿದ್ದ ಮಾಜಿ ಸಚಿವ ಎಂಎಲ್ಸಿ ಸಿ.ಟಿ. ರವಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಷರತ್ತು ಬದ್ದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದೆ. ಆರೋಪಿ ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.ಇನ್ನೊಂದು ಕಡೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಹ ಜಾಮೀನು ಕೋರಿ ಸಿ.ಟಿ. ರವಿ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ನಾಳೆಗೆ ಮುಂದೂಡಿದ್ದರು.
Post a Comment