ಸ್ವಕ್ಷೇತ್ರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಿನ್ನಡೆ, ಬಿಜೆಪಿ 7 ಕಾಂಗ್ರೆಸ್ 5
ಮಡಪ್ಪಾಡಿ: ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.ಭಾರೀ ಬಿರುಸಿನ ಪೈಪೋಟಿ ಕಂಡು ಬಂದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಲುಗೈ ಸಾಧಿಸಿದರೆ, ಮಹಿಳಾ ಮೀಸಲು ಕ್ಷೇತ್ರದಲ್ಲಿ ಎರಡೂ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ಸಮಬಲ ಸಾಧಿಸಿದರು. ಹಿಂದುಳಿದ ವರ್ಗ ಎ, ಹಿಂದುಳಿದ ವರ್ಗ ಬಿ, ಪ.ಜಾತಿ, ಪ.ಪಂಗಡ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ.
ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಪಿ.ಸಿ.ಜಯರಾಮ, ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಚಂದ್ರಶೇಖರ ಗುಡ್ಡೆ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ವಿನಯಕುಮಾರ್ ಮುಳುಗಾಡು ಹಾಗೂ ಕರುಣಾಕರ ಪಾರೆಪ್ಪಾಡಿ ಗೆಲುವು ಸಾಧಿಸಿದರು
ಮಹಿಳಾ ಮೀಸಲು ಕ್ಷೇತ್ರದಿಂದ ಬಿಜೆಪಿಯ ಶಕುಂತಳಾ ಕೇವಳ ಹಾಗೂ ಕಾಂಗ್ರೆಸ್‌ನ ಪ್ರವೀಣ ಯತೀಂದ್ರನಾಥ ಪಾಲ್ತಾಡು ಜಯ ಗಳಿಸಿದ್ದಾರೆ.
ಹಿಂದುಳಿದ ವರ್ಗ ಎ ಸ್ಥಾನದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಆಚಾರಿ ಸಿ.ಎಚ್ ಗಳಿಸಿದ್ದಾರೆ. ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಚಿನ್ ಬಳ್ಳಡ್ಕ ಜಯ ಗಳಿಸಿದರು.
ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆನಂದ ಶೆಟ್ಟಿಮಜಲು ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಪ್ರದೀಪ್ ಕುಮಾರ್ ಪಿ.ಬಿ. ಜಯಗಳಿಸಿದ್ದಾರೆ.
Post a Comment