ಅಸ್ಸಾಂ: ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ನಿಷೇಧಕ್ಕೆ ನಿರ್ಧಾರ

 


ನವದೆಹಲಿ: ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಗೋಮಾಂಸ ಬಡಿಸುವುದನ್ನು ಮತ್ತು ಸೇವಿಸುವುದನ್ನು ನಿಷೇಧಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಬುಧವಾರ ಪ್ರಕಟಿಸಿದರು.

ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ ತಂದು ಹೊಸ ನಿಬಂಧನೆಗಳನ್ನು ಸೇರಿಸಲು ರಾಜ್ಯ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ಹೇಳಿದರು.


'ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಗೋಮಾಂಸ ಸೇವನೆಯನ್ನು ನಿಷೇಧಿಸಲು ನಾವು ನಿರ್ಧರಿಸಿದ್ದೇವೆ' ಎಂದು ಶರ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ಸಚಿವ ಸಂಪುಟ ಸಭೆಗೆ ವರ್ಚುವಲ್ ಆಗಿ ಭಾಗಿಯಾಗಿದ್ದರು.


ಗೋಮಾಂಸಕ್ಕೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ಕಾನೂನು ಬಲಿಷ್ಠವಾಗಿದೆಯಾದರೂ, ರೆಸ್ಟೋರೆಂಟ್, ಹೋಟೆಲ್ ಮತ್ತು ಧಾರ್ಮಿಕ ಅಥವಾ ಸಾಮಾಜಿಕ ಸಭೆಗಳಲ್ಲಿ ಅದರ ಸೇವನೆಗೆ ನಿಷೇಧ ಇಲ್ಲ ಎಂದು ಅವರು ವಿವರಿಸಿದರು.

'ಇದೀಗ, ನಾವು ಈ ಕಾನೂನನ್ನು ಇನ್ನಷ್ಟು ಬಲಪಡಿಸುವ ಮೂಲಕ ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ' ಎಂದು ತಿಳಿಸಿದರು.


7ಕ್ಕೆ ಸಂಪುಟ ವಿಸ್ತರಣೆ: ರಾಜ್ಯ ಸಂಪುಟ ವಿಸ್ತರಣೆಯು ಇದೇ 7 ರಂದು ನಡೆಯಲಿದ್ದು, ಕೆಲ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸುವರು ಎಂದು ಅವರು ಪ್ರತಿಕ್ರಿಯಿಸಿದರು.


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget