ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಶ್ರೀಕಾಂತ್ ಶೆಟ್ಟಿ ಬಾಂಗ್ಲಾದಲ್ಲಿನ ಘಟನೆ ಹಿಂದೂ ಸಮಾಜಕ್ಕೆ ಎಚ್ಚರಿಕೆ ಘಂಟೆಯಾಗಿದೆ, ಹಿಂದೂಗಳಿಗೆ ರಕ್ಷಣೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ತಕ್ಷಣ ಇಸ್ಕಾನ್ ನ ಗುರುಗಳನ್ನು ಬಿಡುಗಡೆ ಮಾಡುವಂತೆ ಮತ್ತು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದರು. ವೇದಿಕೆಯಲ್ಲಿ ಮಾಣಿಲ ಮೋಹನ್ ದಾಸ ಸ್ವಾಮೀಜಿ,ರವೀಂದ್ರ ಪುತ್ತೂರು, ರವಿರಾಜ್ ಶೆಟ್ಟಿ ಕಡಬ,ಶರಣ್ ಪಂಪ್ವಲ್ , ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಘ ಪರಿವಾರ ಡಾ. ಕಲ್ಲಡ್ಕ ಪ್ರಭಾಕರ ಭಟ್,ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ರಾಜೇಶ್ ನಾಯ್ಕ್ ,ಕಿಶೋರ್ ಕುಮಾರ್ ಪುತ್ತೂರು,ಬಿಜೆಪಿ ಮುಖಂಡರಾದ ಸತೀಶ್ ಕುಂಪಲ,ಬಾಲಕೃಷ್ಣ ಭಟ್ ಮತ್ತು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Post a Comment