ಮಂಗಳೂರು, ಡಿ.20 : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನ್ನು ತಿರುಚಿದ ಆರೋಪದಲ್ಲಿ ಕಾಂಗ್ರೆಸ್ ವಿರುದ್ಧ ಮತ್ತು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯನ್ನು ಬಂಧಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ನಗರದ ಮಲ್ಲಿಕಟ್ಟೆ ಸರ್ಕಲ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಶಾಸಕ ವೇದವ್ಯಾಸ ಕಾಮತ್ ಸಹಿತ ದ.ಕ. ಬಿಜೆಪಿ ಯುವ ಮೋರ್ಚಾದ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ಸಂದರ್ಭ ಪೊಲೀಸರ ಜೊತೆ ವಾಗ್ವಾದ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
Post a Comment