ಬೆಳಗಾವಿ (ಡಿ.19): ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟಟ್ಯೂಟ್ ಎಂಬ ಪದ ಬಳಕೆ ಮಾಡಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಳರ್ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದು. ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಬಂಧನವಾಗಿದೆ.
ಲಕ್ಷ್ಮೀ ಹೆಬ್ಬಾಳ್ಳರ್ ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.
ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.
Post a Comment