ಮಹಾರಾಷ್ಟ್ರ ಸರ್ಕಾರ ರಚನೆ: DCM ಆಗಿ ಏಕನಾಥ ಶಿಂದೆ, ಅಜಿತ್ ಪವಾರ್‌ ಪ್ರಮಾಣ ವಚನ

 


ಮುಂಬೈ: ಶಿವಸೇನಾ ಅಧ್ಯಕ್ಷ ಏಕನಾಥ ಶಿಂದೆ ಅವರೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಉದಯ ಸಮಂತ್ ಘೋಷಿಸಿದ್ದಾರೆ.

ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಶಿಂದೆ ಮತ್ತು ಎನ್‌ಸಿಪಿ ನಾಯಕ ಅಜಿತ್‌ ಪವಾ‌ರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಾಜರಿರಲಿದ್ದಾರೆ ಎಂದು ಉದಯ ಅವರು ಹೇಳಿದ್ದಾರೆ.


ಈ ಹಿಂದಿನ ಮಹಾಯುತಿ ಸರ್ಕಾರದಲ್ಲಿ ಶಿಂದೆ ಅವರು ಮುಖ್ಯಮಂತ್ರಿಯಾಗಿದ್ದ ಕಾರಣ ಈಗ ಬಿಜೆಪಿಗೆ ಅಧಿಕಾರ ನೀಡಲು ಇಚ್ಚಿಸುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಶಿಂದೆ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget