ಮಹಾರಾಷ್ಟ್ರ: ಜಲಗಾಂವ್‌ನ ಪರಂದಾ ರೈಲು ನಿಲ್ದಾಣದಲ್ಲಿ ಭಾರಿ ಅಪಘಾತ ಸಂಭವಿಸಿದ್ದು 12 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಗುರುವಾರ(ಜ.22) ವರದಿಯಾಗಿದೆ.
ಪುಷ್ಪಕ್ ಎಕ್ಸ್‌ಪ್ರೆಸ್ ನಲ್ಲಿ ಬೆಂಕಿ ಅಂಟಿಕೊಂಡಿದೆ ಎಂಬ ವದಂತಿಯಿಂದ ಭಯಭೀತಗೊಂಡ ಪ್ರಯಾಣಿಕರು ಚಲಿಸುವ ರೈಲಿನಿಂದ ಏಕಾಏಕಿ ಕೆಳಗೆ ಧುಮಿಕಿದ್ದಾರೆ. ಹೊರಗೆ ಹಾರಿದ ಪ್ರಯಾಣಿಕ ಮೇಲೆ ಕರ್ನಾಟಕ ಎಕ್ಸ್ ಪ್ರೆಸ್ ರೈಲು ಹರಿದಿದ್ದು, ಒಟ್ಟು 12 ಮಂದಿ ಮೃತಪಟ್ಟಿದ್ದಾರೆ.
ಬಳಿಕ ರೈಲಿನಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿವೆ.
ಈ ಅಪಘಾತ ಕುರಿತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಕಂಬನಿ ಮಿಡಿದಿದ್ದಾರೆ. ಸ್ವಿಟ್ಸರ್ಲೆಂಡ್‌ನ ದಾವೋಸ್‌ನಿಂದ ವೀಡಿಯೊ ಸಂದೇಶದ ಮೂಲಕ ಮಾತನಾಡಿರುವ ಫಡ್ನವಿಸ್, "ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನಿಂದ ಹೊಗೆ ಬರುತ್ತಿದೆ ಎಂದು ತಪ್ಪಾಗಿ ಭಾವಿಸಿ ಅವರು ಜಿಗಿದಿದ್ದಾರೆ. ದುರದೃಷ್ಟವಶಾತ್ ಅವರು ಮತ್ತೊಂದು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ನಾನು ಪ್ರತಿ ಮೃತರ ಕುಟುಂಬಕ್ಕೂ 5 ಲಕ್ಷ ರೂ. ಘೋಷಿಸುತ್ತೇನೆ. ಈ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ" ಎಂದು ಫಡ್ನವೀಸ್ ಹೇಳಿದ್ದಾರೆ.
Post a Comment