ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಜ.17ರಂದು ಪ್ರದಾನ

 



ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್, ಚೆಸ್ ವರ್ಲ್ಡ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ.

ಭಾರತೀಯ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಹಾಗೂ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿರುವ ಇನ್ನಿಬ್ಬರು ಕ್ರೀಡಾಪಟುಗಳು.

ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರು ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.


“ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸೂಕ್ತ ಪರಿಶೀಲನೆಯ ನಂತರ, ಈ ಕೆಳಗಿನ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಸಂಸ್ಥೆಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget