ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಮಧ್ಯಾಹ್ನ 2 .00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ ಕ್ಯಾ. ಚೌಟ ಅವರು ಸಾರ್ವಜನಿಕರ ಭೇಟಿಗೆ ಲಭ್ಯವಿದ್ದು, ಸುಳ್ಯ ತಾಲೂಕಿನ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ. ಈ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
Post a Comment