ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ನ ದೌಲತಾಬಾದ್‌ನಲ್ಲಿ ಕೋಮು ಗಲಭೆಯಿಂದಾಗಿ ಮುಚ್ಚಿದ್ದ ದೇಗುಲದ ಬಾಗಿಲನ್ನು 44 ವರ್ಷಗಳ ಬಳಿಕ ತೆರೆಯಲಾಗಿದೆ.
ಸ್ಥಳೀಯ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ದೇಗುಲದ ಬಾಗಿಲನ್ನು ತೆರೆದಿದ್ದಾರೆ.
ಉತ್ತರ ಪ್ರದೇಶದ ಹಲವು ಪ್ರದೇಶಗಳಲ್ಲಿ ಅನೇಕ ದೇವಾಲಯಗಳನ್ನು ಪತ್ತೆ ಮಾಡಿ ಪೂಜೆ ಸಲ್ಲಿಸಿದ ಘಟನೆ ನಡೆದ ಬಳಿಕ ಈ ಬೆಳವಣಿಗೆ ಬೆಳಕಿಗೆ ಬಂದಿದೆ.
*44 ವರ್ಷಗಳ ಬಳಿಕ ದೇಗಲದ ಬಾಗಿಲನ್ನು ಮತ್ತೆ ತೆರೆಯಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಗುಲದ ಬಾಗಿಲನ್ನು ತೆರೆದ ಬಳಿಕ ಒಳಗೆ ದೇವರ ವಿಗ್ರಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದವು. ಸ್ಥಳೀಯ ಆಡಳಿತವು ದೇಗುಲವನ್ನು ಸ್ವಚ್ಛಗೊಳಿಸುವ, ರಿಪೇರಿ ಮಾಡುವ ಕೆಲಸವನ್ನು ಮಾಡುತ್ತಿದೆ. ದೇವಾಲಯದ ಬಾಗಿಲು ತೆರೆಯುವ ಹಂತದಿಂದ ಈವರೆಗೂ ಇತರ ಸಮುದಾಯಗಳಿಂದ ಆಕ್ಷೇಪ ವ್ಯಕ್ತವಾಗಿಲ್ಲ, ಎಲ್ಲವೂ ಶಾಂತವಾಗಿಯೇ ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
Post a Comment