ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅನುಷ್ಠಾನಕ್ಕಾಗಿ ರಚಿಸಲಾದ ಸಮಿತಿಯು ಸಿದ್ದಪಡಿಸಿದ ನಿಯಮಾವಳಿಗಳ ಅಂತಿಮ ಕರಡನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಡೆಹ್ರಾಡೂನ್‌ನಲ್ಲಿ ಸಲ್ಲಿಸಲಾಯಿತು.
ಡೆಹ್ರಾಡೂನ್: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸರ್ಕಾರವು ಇಂದು (ಸೋಮವಾರ) ನಡೆದ ಸಂಪುಟ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಅನುಮೋದನೆ ನೀಡಿದೆ. ಇದರೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ಯುಸಿಸಿಯನ್ನು ಜಾರಿಗೊಳಿಸಿದಂತಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧಾಮಿ, '2022ರಲ್ಲಿ ನಮ್ಮ ಸರ್ಕಾರ ರಚನೆಯಾದ ಕೂಡಲೇ ಯುಸಿಸಿ ಮಸೂದೆಯನ್ನು ಜಾರಿಗೆ ತರುತ್ತೇವೆ ಎಂದು ಜನತೆಗೆ ಭರವಸೆ ನೀಡಿದ್ದೆವು. ಅದರಂತೆ ಈಗ ಯುಸಿಸಿ ಮಸೂದೆಯನ್ನು ಜಾರಿಗೊಳಿಸಿದ್ದೇವೆ. ಯುಸಿಸಿ ಜಾರಿಗೆ ಸಂಬಂಧಿಸಿ ಕರಡು ಸಮಿತಿ ವರದಿಯನ್ನು ಮಂಡಿಸಲಾಗಿದ್ದು, ಸಭಾಧ್ಯಕ್ಷರು ಮಸೂದೆಯನ್ನು ಅಂಗೀಕರಿಸಿದ್ದಾರೆ' ಎಂದು ಹೇಳಿದ್ದಾರೆ.
*ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವವನ್ನು 2025ರಲ್ಲಿ ಆಚರಿಸುತ್ತಿದ್ದೇವೆ. ಇದು ದೊಡ್ಡ ಸಾಧನೆಗಳ ವರ್ಷವಾಗಿರಲಿದೆ. ಯುಸಿಸಿಯನ್ನು ಇದೇ (ಜನವರಿ) ತಿಂಗಳಿನಲ್ಲಿ ಜಾರಿಗೆ ತರುತ್ತೇವೆ' ಎಂದು ಧಾಮಿ ತಿಳಿಸಿದ್ದಾರೆ.
'ಸಂಹಿತೆಗೆ ಇರುವ ಕಾನೂನು ನಿಬಂಧನೆಗಳು ಮತ್ತು ರಾಜ್ಯದಲ್ಲಿ ಅದನ್ನು ಹೇಗೆ ಅನುಷ್ಠಾನಗೊಳಿಸಬೇಕು ಎಂಬ ಕುರಿತು ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಸಂಹಿತೆ ಜಾರಿಗೊಳಿಸುವ ದಿನಾಂಕವನ್ನು ಶೀಘ್ರವೇ ಪ್ರಕಟಿಸುತ್ತೇವೆ' ಎಂದು ಅವರು ಮಾಹಿತಿ ನೀಡಿದ್ದಾರೆ.
Post a Comment