ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ನಾ. ಡಿ’ಸೋಜಾ ಎಂದೇ ಚಿರಪರಿಚಿತರಾಗಿರುವ ಹಿರಿಯ ಸಾಹಿತಿಗಳಾದ ನಾರ್ಬರ್ಟ್ ಡಿ’ಸೋಜಾ ರವರು ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ. ಡಿ’ಸೋಜಾ ರವರಿಗೆ 87 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸಾಗರದ ನಗರಸಭೆ ಆವರಣದಲ್ಲಿರುವ ಗಾಂಧಿ ಮೈದಾನದಲ್ಲಿ ಡಿ’ಸೋಜಾ ರವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜ.07ರಂದು ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ನಾ.ಡಿ’ಸೋಜಾ ರವರ ಪುತ್ರ ನವೀನ್ ಡಿ’’ಸೋಜಾ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಂದೆಯ ನಿಧನದ ಬಗ್ಗೆ ಮಾಹಿತಿ ಪ್ರಕಟಿಸಿದ್ದು, ಹಿರಿಯ ಸಾಹಿತಿ ನಾ.ಡಿ’ಸೋಜ ರವರ ನಿಧನದ ವಿಷಯ ತಿಳಿಯುತ್ತಿದ್ದಂತೆ ರಾಜ್ಯದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಾ ಡಿ’ಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಶರಾವತಿ ಮುಳುಗಡೆ ಪ್ರದೇಶದ ಹಿನ್ನೆಲೆ ಕಥನವಿದ್ದ ಇವರ “ದ್ವೀಪ” ಕಾದಂಬರಿ ಸಿನಿಮಾ ಆಗಿತ್ತು.
Post a Comment