ಹಿಂದೂ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ
ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯ ಒಳಗೆ ಕಾನೂನು ಬಾಹಿರವಾಗಿ ಕಾಂಗ್ರೆಸ್ ಬೆಂಬಲಿತ ಎಸ್‌ಡಿಪಿಐ ಸದಸ್ಯ, ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಮೌಲ್ವಿಯನ್ನು ಕರೆಸಿ ನಮಾಜ್ ಮಾಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಗಂಗೊಳ್ಳಿ ವತಿಯಿಂದ ನಡೆದ ಪ್ರತಿಭಟನೆ ನಡೆಯಿತು.
ಮುಂದಿನ ದಿನಗಳಲ್ಲಿ ಈ ರೀತಿ ಘಟನೆ ಮರುಕಳಿಸಿದರೆ ತಕ್ಕ ಉತ್ತರ ನೀಡಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನಾ ಕಾರ್ಯಕ್ರಮ ದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ,
ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ , ಹಿಂದೂ ಸಂಘಟನೆ ಪ್ರಮುಖ ರು ಉಪಸ್ಥಿತರಿದ್ದರು
Post a Comment