ಸರಿಗಮಪ ಜ್ಯೂರಿ, ಲಯವಾದ್ಯಗಳ ಮಾಂತ್ರಿಕ ಇನ್ನಿಲ್ಲ; ರಿದಂ ಕಂಪೋಸರ್ ಎಸ್ ಬಾಲಿ ವಿಧಿವಶ

 


ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಇರುತ್ತಿದ್ದ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.


ಮೃದಂಗ, ತಬಲಾ, ಡೋಲಕ್, ಡೋಲ್ಕಿ, ಖಂಜರಿ, ಕೋಲ್ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು.

ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್, ದಕ್ಷಿಣ ಭಾರತದ ಏಕೈಕ ರಿದಂ  ಕಂಪೋಸರ್, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಗೆ ಇವರದು.

ತಂದೆ ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಬಾಗಿಯಾಗಿದ್ದಾರೆ.

ಬಾಲಿಯವರು ಶಾಸ್ತ್ರೀಯವಾಗಿ ಕಲಿತದ್ದು ಮೃದಂಗ ಮಾತ್ರ. ಆದರೆ ತಮ್ಮ ಶ್ರದ್ದೆಯಲ್ಲೇ ತಬಲ, ಡೋಲಕ್, ಡೋಲ್ಕಿ ಖೋಲ್‌, ಖಂಜಿರ ಮುಂತಾದ ಹಲವಾರು ವಾದ್ಯಗಳನ್ನು ನುಡಿಸುವ ಪರಿಣತಿಯನ್ನು ಸಾಧಿಸಿದರು. ಹೀಗೆ ಸಕಲ ಲಯ ವಾದ್ಯಗಳ ನುಡಿಸುವಿಕೆಯಲ್ಲಿ ಪರಿಣತಿ ಪಡೆದ ಅಪರೂಪದ ಲಯವಾದ್ಯಗಾರ ಇಂದು ಅಗಲಿದ್ದಾರೆ.


ಹೆಸರಾಂತ ಗಾಯಕರುಗಳಾದ ಬಾಳಪ್ಪ ಹುಕ್ಕೇರಿ, ಕಾಳಿಂಗರಾವ್, ಮೈಸೂರು ಅನಂತಸ್ವಾಮಿ, ಶ್ಯಾಮಲಭಾವೆ, ಸಿ ಅಶ್ವತ್, ರತ್ನಮಾಲಾ ಪ್ರಕಾಶ್, ಮಾಲತಿ ಶರ್ಮ ಮುಂತಾದವರ ಕಾರ್ಯಕ್ರಮಗಳಲ್ಲಿ ಬಾಲಿ ಸಾಥ್ ನೀಡಿದ್ದಾರೆ. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್- ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಅವರದ್ದಾಗಿದೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ಅವರಿಗೆ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget