ಬೆಂಗಳೂರು: ಕೇಸರಿ ಮನೆಯಲ್ಲಿನ ಬಣ ಬಡಿದಾಟಕ್ಕೆ ಮೇಜರ್ ಹೊಸ ಟ್ವಿಸ್ಟ್ ಸಿಕ್ಕಿದ್ದು, ಅದೇನೆಂದರೆ ಕಾರ್ಕಳ ಶಾಸಕ, ಮಾಜಿ ಸಚಿವ ವಿ. ಸುನೀಲ್ ಕುಮಾರ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಪಕ್ಷದ ಬಣ ಬಡಿದಾಟ ಕಾರಣವಲ್ಲ, ವೈಯಕ್ತಿಕ ಕಾರಣಕ್ಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಾಹಿಸುತ್ತಿರುವ ಸುನಿಲ್ ಕುಮಾರ್, ವಿಜಯೇಂದ್ರ ತಂಡದಿಂದ ಹೊರಬರಲು ಪ್ರಯತ್ನಿಸುತ್ತಿದ್ದು ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ವಿಜಯೇಂದ್ರ ಜೊತೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಆದರೆ ಇಬ್ಬರ ನಡುವೆ ಯಾವುದೇ ರೀತಿಯ ಭಿನ್ನಭಿಪ್ರಾಯವಿಲ್ಲದ ತಟಸ್ಥ ಸಂಬಂಧವಿದೆ. ಈಗ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಕುಮಾರ್, ಹುದ್ದೆಯಿಂದ ಮುಕ್ತಿಗೊಳಿಸುವಂತೆ ಹೈಕಮಾಂಡ್ಲೆ ಈ ಮನವಿ ಮಾಡಿರುವುದು ಅಚ್ಚರಿಯಾಗಿದ್ದು ಆದ್ರೆ, ಹೈಕಮಾಂಡ್ ಸುನಿಲ್ ಕುಮಾರ್ ಅವರ ಮನವಿಯ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ತಿಳಿದು ಬಂದಿದೆ.
Post a Comment