ಉತ್ತರ ಪ್ರದೇಶ | ರಾಮ ಮಂದಿರ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಅಯೋಧ್ಯೆ ಸಜ್ಜು

 


ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮ ಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವವನ್ನು ಜನವರಿ 11 ರಿಂದ 13 ರವರೆಗೆ ಆಚರಿಸಲು ತೀರ್ಮಾನಿಸಲಾಗಿದ್ದು, ಸಿದ್ಧತೆ ನಡೆದಿದೆ ಎಂದು ದೇವಸ್ಥಾನದ ಟ್ರಸ್ಟ್‌ ತಿಳಿಸಿದೆ.

ಕಳೆದ ವರ್ಷ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದ ಜನರಿಗೆ, ವಾರ್ಷಿಕೋತ್ಸವದ ಆಚರಣೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಹೇಳಿದೆ.


ಅಂಗದ ಟೀಲಾ ಪ್ರದೇಶದಲ್ಲಿ ಜರ್ಮನ್ ಹ್ಯಾಂಗ‌ರ್ ಟೆಂಟ್ ನಿರ್ಮಿಸಲಾಗಿದೆ. ಇದು 5,000 ಜನರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಮಂಟಪ ಮತ್ತು ಯಜ್ಞಶಾಲೆಯಲ್ಲಿ ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ಆಚರಣೆಗಳು ಮತ್ತು ದೈನಂದಿನ ರಾಮ ಕಥಾ ಪ್ರವಚನಗಳನ್ನು ಒಳಗೊಂಡ ಕಾರ್ಯಕ್ರಮವನ್ನು ವೀಕ್ಷಿಸಲು ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಭಾಗವಹಿಸಲು 110 ವಿಐಪಿಗಳು ಸೇರಿದಂತೆ ಇತರ ಗಣ್ಯ ಅತಿಥಿಗಳು, ಸಂತರಿಗೆ ಆಮಂತ್ರಣ ಪತ್ರಗಳನ್ನು ನೀಡಲಾಗಿದೆ ಎಂದು ರಾಯ್ ಹೇಳಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ನಿವಾಸಿಗಳು ಮತ್ತು ಯಾತ್ರಾರ್ಥಿಗಳು ಭಾಗವಹಿಸುವಂತೆ ರಾಯ್ ಮನವಿ ಮಾಡಿದ್ದಾರೆ.


2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget