ಬೆಂಗಳೂರು: ಸಪಕ್ಷದ ಬಣ ರಾಜಕೀಯ ಮತ್ತು ಭಿನ್ನಮತ ಚಟುವಟಿಕೆಗಳ ಬಗ್ಗೆ ಶುಕ್ರ ವಾರ ರಾಜ್ಯ ನಾಯಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ `ನಡೆಸಲಿದ್ದಾರೆ. ಅಧಿಕೃತ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಡ್ಡಾ ಅವರು ಶುಕ್ರವಾರ ಕಾರ್ಯಕ್ರಮ ಮುಗಿದ ಬಳಿಕ ಸಮಾರು 2 ತಾಸು ಕುಮಾರ ಕೃಪ ಅತಿಥಿ ಗೃಹದಲ್ಲಿ ತಂಗಲಿದ್ದಾರೆ.
ಈ ವೇಳೆ ವಿವಿಧ ರಾಜ್ಯ ನಾಯಕರು ಪ್ರತ್ಯೇಕವಾಗಿ ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯ ಘಟಕದಲ್ಲಿನ ಗೊಂದಲಗಳನ್ನು ಬಗೆಹರಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಬುಧವಾರವಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಬೆಳವ ಣಿಗೆಗಳ ಬಗ್ಗೆ ವಿವರಿಸಿದ್ದರು. ಜತೆಗೆ ಭಿನ್ನಮತೀಯ ನಾಯಕರ ಗುಂಪಿನಲ್ಲಿ ಗುರುತಿಸಿಕೊಂ ಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಬಣದವಿರುದ್ಧ ದೂರು ನೀಡಿದ್ದರು. ಅದರ ಬೆನ್ನಲ್ಲೇ ಪೂರ್ವ ನಿಗದಿತ ಕಾರ್ಯ ಕ್ರಮದ ಹಿನ್ನೆಲೆಯಲ್ಲಿ ನಡ್ಡಾ ಬೆಂಗಳೂರಿಗೆ ಆಗಮಿಸುತ್ತಿದ್ದುದರಿಂದ ವಿಜಯೇಂದ್ರ ದೆಹಲಿಯಿಂದ ವಾಪಸಾದರು.
Post a Comment