ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಮಾನಹಾನಿ ಹಾಗೂ ಅವಹೇಳನಕರ ಹೇಳಿಕೆಗಳನ್ನು ನೀಡದದಂತೆ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.
ತಿಮರೋಡಿ ಮತ್ತು ಸಂಗಡಿಗರು ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಲ್ಲದೆ ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ನ್ಯಾಯಾಂಗ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆ ಮಾಡಿರುವುದಾಗಿ ಅರ್ಜಿದಾರರು ಮನವರಿಕೆ ಮಾಡಿದ್ದನ್ನು ಹೈಕೋರ್ಟ್ ತೀವ್ರವಾಗಿ ಪರಿಗಣಿಸಿ ಖಡಕ್ ಆದೇಶ ನೀಡಿದೆ.
ಕ್ಷೇತ್ರ ಧರ್ಮಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಮತ್ತು ಅದರ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ನ್ಯಾ.ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಅಲ್ಲದೆ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆಯನ್ನು ಮಾಡಬಾರದು ಎಂದು ಸೂಚಿಸಿದೆ.
Post a Comment