ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ|ಮೂವರು ಆರೋಪಿಗಳು ಸೆರೆ



ಮಂಗಳೂರು ಕೋಟೆಕಾ‌ರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ದರೋಡೆಗೈದು ಪರಾರಿಯಾದವರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ.

ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್‌ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಈ ದರೋಡೆ ನಡೆಸಿದ್ದರು. ದರೋಡೆ ಮಾಡಿದ ನಂತರ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿದ್ದರು. ಬಂಧಿತರಿಂದ ತಲ್ವಾರ್, 2 ಪಿಸ್ತೂಲ್ ಹಾಗು ಇತರ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕಮಿಷನರ್‌ ತಿಳಿಸಿದ್ದಾರೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget