ಕಾಡಿನಿಂದ ಹೊರಬಂದ ನಕ್ಸಲರು; ಶರಣಾಗೋರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

Recent Post

 




ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಬದಲಾಗಿ ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಶರಣಾಗರಾಗುತ್ತಿದ್ದಾರೆ. ಹೀಗಾಗಿ ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ, ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುಂತಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಳಿ (ರಾಯಚೂರು), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಇವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಸಂಜೆ ವೇಳೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಲಿದ್ದಾರೆ. ಇನ್ನು ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ.



ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು. ಆದ್ರೆ, ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.

ಈ ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ. ಸಾಕಷ್ಟು ಬೇಡಿಕೆಗಳನ್ನಿಟ್ಟುಕೊಂಡೇ ಶರಣಾಗುತ್ತಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಮೂರು ಕೆಟಗರಿ ಇದೆ.

ಇನ್ನು ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Post a Comment

Emoticon
:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget